ಕೆ.ಆರ್.ಪೇಟೆ: ಚೆಕ್ ಚೆಕ್ ಪೋಸ್ಟ್ ಗಳಲ್ಲಿಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಮಾಡುವ ಮೂಲಕ ಸೋಂಕಿತರು ತಾಲ್ಲೂಕಿನ ಒಳಗೆ ಸುಳಿಯದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸೂಚಿಸಿದ್ದಾರೆ.
ತಾಲ್ಲೂಕಿನ ಗಡಿ ಗ್ರಾಮ ಆನೆಗೊಳದಲ್ಲಿ ಸ್ಥಾಪಿಸಲಾಗಿರುವ ಚೆಕ್ ಚೆಕ್ ಪೋಸ್ಟ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಕೆಲವು ಸೂಚನೆಗಳನ್ನು ನೀಡಿದರಲ್ಲದೆ, ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಂತರ ಜಿಲ್ಲಾ ಸಂಚಾರವನ್ನು ನಿರ್ಬಂಧ ಮಾಡಲಾಗಿದ್ದು ಬೇರೆ ಬೇರೆ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳ ಜನರು ನಮ್ಮ ತಾಲ್ಲೂಕಿನ ಗಡಿಯನ್ನು ದಾಟಿ ಒಳಗೆ ಬರದಂತೆ ತಡೆಯಬೇಕು. ಅತಿಕ್ರಮ ಪ್ರವೇಶ ಮಾಡುವವರನ್ನು ಕೂಡಲೇ ಪೊಲೀಸ್ ವಶಕ್ಕೆ ನೀಡಲಾಗುವುದು. ಪ್ರತೀ ವಾಹನವನ್ನೂ ಕೂಲಂಕುಷವಾಗಿ ಪರಿಶೀಲನೆ ಮಡುವ ಮೂಲಕ ನಿಮಗೆ ವಹಿಸಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು.
ತಪಾಸಣಾ ವೇಳೆ ನಿಮ್ಮ ಸುರಕ್ಷತೆಯ ಕಡೆಗೆ ಗಮನ ಹರಿಸಬೇಕು. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು, ತಪಾಸಣೆ ನಡೆಸಬೇಕು ತಪಾಸಣೆಯ ನಂತರ ನಿಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು. ನಿಮ್ಮ ಸುರಕ್ಷತೆಯೇ ನಮಗೆ ಮೊದಲ ಆದ್ಯತೆಯಾಗಿದ್ದು ಜವಾಬ್ದಾರಿಯನ್ನು ಅರಿತು ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

By admin