ಮೈಸೂರು. ಜನವರಿ 1 (- ತಿ.ನರಸೀಪುರ ಪುರಸಭಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ ಅಂತ್ಯೋದಯ ಯೋಜನೆ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗುತ್ತಿಗೆ ಆಧಾರದ ಮೇಲೆ ಮತ್ತು ಗೌರವಧನ ಆಧಾರದ ಮೇಲೆ ಪುರಸಭಾ ವ್ಯಾಪ್ತಿಯಲ್ಲಿ ವಿಕಲಚೇತನರ ಹಾಗೂ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯಕ್ರಮವಾದ ನಗರ ಪುನರ್ವಸತಿ ಯೋಜನೆಯಡಿ ಖಾಲಿಯಿರುವ ನಗರ ಪುನರ್ವಸತಿಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿದಾರರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಾಸ ಸ್ಥಳ ದೃಢೀಕರಣ ಪತ್ರ ಲಗತ್ತಿಸಬೇಕು. 18ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಂಧರಿಗೆ ಭಾಗಶಃ ಶ್ರವಣದೋಷವುಳ್ಳವರಿಗೆ ಮತ್ತು ದೈಹಿಕಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುವುದು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ, ಗುರುತಿನ ಚೀಟಿ ದಾಖಲೆಯನ್ನು ಲಗತ್ತಿಸಬೇಕು.


ಪುರಸಭಾ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ, ಸೌಲಭ್ಯಕಲ್ಪಿಸಲು ಸಮರ್ಥರಾಗಿರಬೇಕು. ಗೌರವಧನ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ ಪ್ರಗತಿ ವಿಕಲಚೇತನರೊಂದಿಗೆ ಸಂಬAಧ ವಿವಿಧ ಇಲಾಖೆಗಳೊಂದಿಗೆ ಸ್ವಯಂಸೇವಾ ಸಂಸ್ಥೆ ಸಮುದಾಯದೊಂದಿಗೆ ಇಟ್ಟುಕೊಂಡಿರುವ ಸಂಬAಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.


ಆಯ್ಕೆ ಮಾಡುವಾಗ ಸರ್ಕಾರ ನಿಗದಿಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು ಸಮರ್ಥ ಎಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡಲಾಗುವುದು. ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸುವAತೆ ಕೋರಲು ಅವಕಾಶ ವಿರುವುದಿಲ್ಲ.ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ 2022ರ ಜನವರಿ 15 ರಂದು ಸಂಜೆ 4 ಗಂಟೆಯ ಒಳಗೆ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಅಂಗವಿಕಲ ಶಾಖೆಯ ಅಧಿಕಾರಿಗಳಾದ ಕೆಂಪರಾಜು ಎಸ್. ಅವರನ್ನು ಸಂಪರ್ಕಿಸಬಹುದು ಎಂದು ಟಿ.ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಹೆಚ್.ಆರ್ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.