ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗಳಿಗೆ ಎರಡು ಲಾರಿಗಳು ಡಿಕ್ಕಿ.ಯಾವುದೇ ಪ್ರಾಣ ಪಾಯವಿಲ್ಲ.
ಪಾವಗಡ ಪಟ್ಟಣದ ಹೊರವಲಯದಲ್ಲಿ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಭತ್ತ ತುಂಬಿಕೊಂಡು ಕಲ್ಯಾಣದುರ್ಗದ ಕಡೆಯಿಂದ ಬರುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಆದರೆ ಯಾವುದೇ ಪ್ರಾಣಾಪಾಯ ನಡೆದಿಲ್ಲ,ಮತ್ತೊಂದು ಲಾರಿ ತುಮಕೂರು ಕಡೆಯಿಂದ ಬರುತ್ತಿದ್ದು ಅದೂ ಸಹ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಮಧ್ಯದಲ್ಲಿರುವ ಕಬ್ಬಿಣದ ಡ್ರಿಲ್ ಜಖಂಗೊಂಡಿದ್ದು ಇಲ್ಲಿಯೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಅದೃಷ್ಟವಶಾತ್ ಚಾಲಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆ ಬರುತ್ತಿದ್ದರಿಂದ ಚಾಲಕರಿಗೆ ವಿಭಜಕ ಸರಿಯಾಗಿ ಕಾಣದಿರುವುದು ಅವಘಡಕ್ಕೆ ಕಾರಣವಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.
ಈ ರೀತಿಯಲ್ಲಿ ಹಲವು ಅಪಘಾತಗಳು ಸಂಭವಿಸುತ್ತಲೆ ಇದ್ದರು ಸಹ ಸಂಬಂಧ ಪಟ್ಟ ಅಧಿಕಾರಿಗಳು ಅಪಘಾತ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೂಂಡಿಲ್ಲ ಎಂಬುದು ಸ್ಥಳೀಯರ ಆರೋಪಿಸಿದ್ದಾರೆ.