ಮೈಸೂರು ಫೆಬ್ರವರಿ 09 – ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿ ರಲ್ಲಿ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ಹಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿದಾರರು ಕನಿಷ್ಠ 2 ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ 40,000ರೂ. ಗಳ ಮಿತಿಯಲ್ಲಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.


24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳ ಘಟಕಕ್ಕೆ 2.50 ಲಕ್ಷ ರೂ. ನಿಗಧಿಪಡಿಸಲಾಗಿದ್ದು, ಇದರಲ್ಲಿ 2 ಲಕ್ಷ ರೂ. ಸಹಾಯಧನ ಹಾಗೂ 50,000ರೂ. 4% ರ ಬಡ್ಡಿ ದರದ ಸಾಲ ಒಳಗೊಂಡಿರುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳ ಘಟಕಕ್ಕೆ 4 ಲಕ್ಷ ರೂ. ನಿಗಧಿಪಡಿಸಲಾಗಿದ್ದು, 3.50 ಲಕ್ಷ ರೂ. ಸಹಾಯಧನ ಹಾಗೂ 50000ರೂ. ಗಳ 4% ಬಡ್ಡಿ ದರದ ಸಾಲ ಒಳಗೊಂಡಿದ್ದು, ನಿಗಧಿತ ಘಟಕಕ್ಕೆ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಸೌಲಭ್ಯ ಒದಗಿಸಲಾಗುತ್ತದೆ.
ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗಧಿ ಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ.


ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in ವೆಬ್‌ಸೈಟ್‌ಅನ್ನು ಸಂಪರ್ಕಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ:080-22374832, ಜಿಲ್ಲಾ ಕಛೇರಿಯ ದೂರವಾಣ ಸಂಖ್ಯೆ: 0821-2341194 ಸಂಪರ್ಕಿಸಿ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ