ಬೆಂಗಳೂರು: ಹೆಚ್ಚುತ್ತಿರುವ ಕೊರೋನಾ ಸೋಂಕನ್ನು ನಿಯಂತ್ರಿಸಿ ಮಹಾಮಾರಿಯಿಂದ ರಾಜ್ಯದ ಜನರನ್ನು ಕಾಪಾಡುವುದು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸವಾಲ್ ಆಗಿ ಪರಿಣಮಿಸಿದೆ. ಮತ್ತೊಂದೆಡೆ ಕೇಂದ್ರದ ಮಲತಾಯಿ ಧೋರಣೆ ಮುಂದುವರೆದಿದ್ದು ಕೋವಿಡ್ ನಿರ್ವಹಣೆ ಹೇಗೆಂಬ ಚಿಂತೆ ಸರ್ಕಾರವನ್ನು ಕಾಡತೊಡಗಿದೆ.
ಲಾಕ್ ಡೌನ್ ನಿಂದ ಪ್ರತಿ ದಿನವೂ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವಾಗುತ್ತಿದ್ದು ನಿರ್ವಹಣೆ ಕಷ್ಟ ಸಾಧ್ಯವಾಗಿದೆ. ಹೀಗಾಗಿ ಬೇರೆ ದಾರಿ ಕಾಣದ ಮುಖ್ಯಮಂತ್ರಿಗಳು ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು (ದಿನಾಂಕ: 01.05.2021 ರಿಂದ ಅನ್ವಯವಾಗುವಂತೆ) ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಿರುವುದಾಗಿ ಮುಖ್ಯಮಂತ್ರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.