ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನ ಉತ್ಪಾದಕ ಘಟಕ ನಿರ್ಮಿಸಲು ಮುಂದಾಗಿದೆ.
ಮೈಸೂರು 6 ನೇ July 2021: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಬೆಂಗಳೂರು ಬಳಿಯ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.
ಕಂಪನಿಯು ಈಗಾಗಲೇ ಈ ಹಿಂದೆ ಘೋಷಿಸಿದಂತೆ 120 ಮಿಲಿಯನ್ ರೂ.ಗಳ ಹೂಡಿಕೆಯೊಂದಿಗೆ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕವಾಗಿ ಮೇಲ್ದರ್ಜೆಗೇರಿಸುವ ಮತ್ತು ನಿರ್ಮಿಸುವ ಪ್ರಕ್ರಿಯೆಯಲ್ಲಿದೆ. ಇದೀಗ ನೂತನ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸುವುದರಿಂದ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿರುವ ಆಕ್ಸಿಜನ್ ಘಟಕವು ಬಾಟ್ಲಿಂಗ್ ಸೌಲಭ್ಯವನ್ನು ಹೊಂದಿರುತ್ತದೆ. ಇದು ಆಮ್ಲಜನಕ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ.
ಆಮ್ಲಜನಕ ಘಟಕವು ದಿನಕ್ಕೆ ಸುಮಾರು 50 ಸಿಲಿಂಡರ್ ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದನ್ನು ಬಿಡದಿ ಸಿ.ಎಚ್.ಸಿ ಮತ್ತು ರಾಮನಗರ ಜಿಲ್ಲಾಸ್ಪತ್ರೆಗೆ ಪೂರೈಸಲಾಗುವುದು. ನೂತನ ಘಟಕವು ನವೆಂಬರ್ 2021 ರ ಅಂತ್ಯದ ವೇಳೆಗೆ ಬಳಕೆಗೆ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಭೂಮಿ ಪೂಜೆ ವೇಳೆ ಮಾತನಾಡಿದ ಮಾಗಡಿ ಕ್ಷೇತ್ರದ ಗೌರವಾನ್ವಿತ ಶಾಸಕ ಶ್ರೀ ಎಮಂಜುನಾಥ್ ಅವರು, “ಕೇಂದ್ರ ಮತ್ತು ರಾಜ್ಯ ಸರ್ಕಾರದ ಚುರುಕಾದ ಮತ್ತು ಸ್ಕೇಲಬಲ್ ಆರೋಗ್ಯ ಸೌಲಭ್ಯಗಳ ಜೊತೆಗೆ ಕಾರ್ಪೊರೇಟ್ ಗಳಿಂದ ನಿರಂತರ ಬೆಂಬಲವ ದೊರೆಯುತ್ತಿರುವುದು ತುಂಬಾ ಪ್ರೋತ್ಸಾಹದಾಯಕವಾಗಿದೆ. ಇದು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ನಮ್ಮ ಪ್ರಯತ್ನಗಳನ್ನು ಹೆಚ್ಚಿಸಿದೆ. ಟಿಕೆಎಂ ಯಾವಾಗಲೂ ಸಮುದಾಯ ಕಾರ್ಯಕ್ರಮಗಳಿಗೆ ಸಕ್ರಿಯ ಕೊಡುಗೆ ನೀಡುತ್ತದೆ. ಹೊಸ ಆಮ್ಲಜನಕ ಉತ್ಪಾದಿಸುವ ಘಟಕವನ್ನು ಸ್ಥಾಪಿಸುವುದು ಈ ಪ್ರದೇಶದಲ್ಲಿ ನಿರ್ಣಾಯಕ ಆರೋಗ್ಯ ಮೂಲಸೌಕರ್ಯದ ಲಭ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.