ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ
.
ಆಸಕ್ತರು ದಿನಾಂಕ: ೧೪.೦೧.೨೦೨೨ ರೊಳಗಾಗಿ ಬೆಳಗ್ಗೆ ೧೦.೦೦ ಗಂಟೆಯಿಂದ ಸಂಜೆ ೪.೦೦ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ೦೮೨೧-೨೫೧೫೯೪೪/೯೯೬೪೭೬೦೦೯೦ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.