ಗುಂಡ್ಲುಪೇಟೆ: ದ್ವಿಚಕ್ರ ವಾಹನ ಸವಾರ ಪಾದಚಾರಿಗೆ ಗುದ್ದಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ನಡೆದಿದೆ.

ತಾಲ್ಲೂಕಿನ ಕಗ್ಗಳ ಗ್ರಾಮದ ವೆಂಕಟಪ್ಪನಾಯಕ ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಪಟ್ಟಣದ ಹಳ್ಳದಕೇರಿ ನಿವಾಸಿ ಹುಸೇನ್ ತಲೆಗೂ ತೀವ್ರ ಪೆಟ್ಟಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ವರದಿ: ಬಸವರಾಜು ಎಸ್ ಹಂಗಳ

By admin