ಮೈಸೂರು, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್ ವತಿಯಿಂದ ಜುಲೈ ತಿಂಗಳ ಮೂರನೇ ವಾರದಲ್ಲಿ ಉಚಿತವಾಗಿ ಕರ್ನಾಟಕ ಕೃಷಿ ಮಾರುಕಟ್ಟೆ ಅಧ್ಯಯನ ಸಂಸ್ಥೆಯಲ್ಲಿ ಒಂದು ದಿನದ `ಉದ್ಯಮಶೀಲತಾ ಮಾರ್ಗದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರು ಜುಲೈ 19ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮತ್ತು ಕೈಗಾರಿಕಾ ಮತ್ತು ಸೇವಾ ಚಟುವಟಿಕೆ ಪ್ರಾರಂಭಿಸಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳು ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಆಸಕ್ತರು ತಮ್ಮ ಇತ್ತೀಚಿನ ಎರಡು ಪಾಸ್ಪೋರ್ಟ್ ಅಳತೆಯ ಫೆÇೀಟೋ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರದ ಜೆರಾಕ್ಸ್ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಎಂ.ಕೆ. ಕಿಶೋರ್ ಮೊಬೈಲ್ ಸಂಖ್ಯೆ: 7353474649, ಸುನೀಲ್ ಕುಮಾರ್ ಮೊಬೈಲ್ ಸಂಖ್ಯೆ:8310091083 ಅಥವಾ ಜ್ಯೋತಿ ಮೊ.ಸಂ: 6361611136 ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin