ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರುವ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಸಿದ್ದತಾ ಕಾರ್ಯಗಳನ್ನು ಇಂದು ಪರಿಶೀಲಿಸಲಾಯಿತು.
ಮಲೆ ಮಹದೇಶ್ವರ ಬೆಟ್ಟದ ನಾಗಮಲೆಭವನದಲ್ಲಿಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಜಯವಿಭವ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಭೆಯಲ್ಲಿ ಯುಗಾದಿ ಜಾತ್ರಾ ಕಾರ್ಯಕ್ರಮ ದ ಪೂರ್ವ ಸಿದ್ದತಾ ಕಾರ್ಯಗಳನ್ನು ಪರಿಶೀಲಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕರ ಸಮ್ಮುಖದಲ್ಲಿ ಈ ಹಿಂದೆಯೇ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ಒಟ್ಟಾಗಿ ಪೂರ್ವಬಾವಿ ಸಭೆ ನಡೆಸಲಾಗಿದೆ. ಮಹಾಶಿವರಾತ್ರಿ ಜಾತ್ರಾ ಹಾಗೂ ರಥೋತ್ಸವ ಯಶಸ್ವಿಯಾಗಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಜಾತ್ರಾ ಏರ್ಪಾಡು ಕುರಿತು ಈ ಹಿಂದಿನ ಸಭೆಯಲ್ಲಿ ನೀಡಿರುವ ಸೂಚನೆ ಸಲಹೆಗಳ ಅನುಸಾರ ಯುಗಾದಿ ಜಾತ್ರಾ ಮಹೋತ್ಸವ ಮತ್ತು ರಥೋತ್ಸವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಪ್ರಾಧಿಕಾರದ ಕಾರ್ಯದರ್ಶಿಯವರಾದ ಜಯವಿಭವ ಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಮಾರ್ಚ್ ೨೯ರಂದು ಯುಗಾದಿ ಜಾತ್ರೆ ಪ್ರಾರಂಭವಾಗಲಿದೆ. ಮಾರ್ಚ್ ೩೦ರಂದು ಎಣ್ಣೆಮಜ್ಜನ ವಿಶೇ? ಸೇವೆ ಉತ್ಸವ, ಮಾರ್ಚ್ ೩೧ ಹಾಗೂ ಏಪ್ರಿಲ್ ೧ರಂದು ಅಮಾವಾಸ್ಯೆ ವಿಶೇ? ಸೇವೆ ಉತ್ಸಾವಾದಿಗಳು ನಡೆಯಲಿವೆ. ಏಪ್ರಿಲ್ ೨ರಂದು ಶನಿವಾರ ಚಾಂದ್ರಮಾನ ಯುಗಾದಿ ಮಹಾರಥೋತ್ಸವ ನಡೆಯಲಿದೆ ಎಂದರು.
ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಬೇಕು. ಕಾವೇರಿ ನೀರು ಸರಬರಾಜು ಯೋಜನೆಯಡಿ ನಿರ್ಮಿಸಿರುವ ಟ್ಯಾಂಕ್,ಶುದ್ದ ಕುಡಿಯುವ ನೀರಿನ ಘಟಕಗಳ ಮೂಲಕ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾಲ್ನಡಿಗೆಯಲ್ಲಿ ಕ್ಷೇತ್ರಕ್ಕೆ ಬರುವವರಿಗೂ ಶುದ್ದ ಕುಡಿಯುವ ನೀರು ಪೂರೈಸಬೇಕು ಎಂದರು.
ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಶಾಮಿಯಾನ ಹಾಕಲಾಗುವುದು. ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಸಾಗುವ ಭಕ್ತರಿಗೂ ನೆರಳಿನ ವ್ಯವಸ್ಥೆ ಮಾಡಲಾಗುವುದು. ಇತರೆ ಅವಶ್ಯಕತೆ ಕಂಡು ಬಂದ ಸ್ಥಳದಲ್ಲಿಯೂ ನೆರಳಿನ ವ್ಯವಸ್ಥೆ ಕಲ್ಪಿಸಲಾಗುವುದು. ಅಂತರಗಂಗೆ ಪಕ್ಕದಲ್ಲಿ ಸ್ನಾನದ ಸೌಲಭ್ಯಕ್ಕೆ ಈಗಾಗಲೇ ಶವರ್‌ಗಳನ್ನು ಅಳವಡಿಸಲಾಗಿದೆ. ಇವುಗಳ ಸುಸ್ಥಿತಿಯನ್ನು ಪರಿಶೀಲಿಸಬೇಕು. ಶೌಚಾಲಯಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.
ಯುಗಾದಿ ಜಾತ್ರಾ ಸಂದರ್ಭದಲ್ಲಿಯೂ ನಿರಂತರವಾಗಿ ದಾಸೋಹ ವ್ಯವಸ್ಥೆ ಇರಲಿದೆ. ಶಿವರಾತ್ರಿ ಜಾತ್ರಾ ಸಂದರ್ಭದಲ್ಲಿ ಕೈಗೊಂಡಂತೆ ವಿಶೇ? ದಾಸೋಹ ವ್ಯವಸ್ಥೆಯು ಸಹ ಇರಲಿದ್ದು ಇದಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣ ಪ್ರಮಾಣದಲ್ಲಿ ನೋಡಿಕೊಳ್ಳುವಂತೆ ಜಯವಿಭವಸ್ವಾಮಿ ಅವರು ಸೂಚಿಸಿದರು.
ಖಾಸಗಿ ವಾಹನಗಳು, ಕೆಎಸ್‌ಆರ್‌ಟಿಸಿ, ತಮಿಳುನಾಡಿನ ಸಾರಿಗೆ ವಾಹನಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಜಾತ್ರಾ ದಿನಗಳಂದು ಸ್ವಚ್ಚತಾ ಕಾರ್ಯ ನಿರ್ವಹಿಸಲು ಹೆಚ್ಚುವರಿಯಾಗಿ ಪೌರಕಾರ್ಮಿಕರನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ವಿಶೇ?ವಾಗಿ ರಥೋತ್ಸವ ದಿನದಂದು ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಿ ಶೀಘ್ರ ಅವಧಿಯಲ್ಲಿ ಸ್ವಚ್ಚತಾ ಕಾರ್ಯ ಪೂರ್ಣಗೊಳಿಸಲೂ ಸಹ ಅಗತ್ಯ ಸಿದ್ದತೆ ಕೈಗೊಳ್ಳಬೇಕೆಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ ೩೧ ಹಾಗೂ ಏಪ್ರಿಲ್ ೧ರಂದು ಏರ್ಪಾಡು ಮಾಡಬೇಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಾನಪದ ಕಲೆ, ಇತರೆ ಕಲಾ ಪ್ರಕಾರಗಳ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುವ ನಿಟ್ಟಿನಲ್ಲಿ ಕ್ರವಹಿಸಬೇಕಿದೆ ಎಂದು ತಿಳಿಸಿದರು.
ಭದ್ರತಾ ವ್ಯವಸ್ಥೆ, ಕೆಎಸ್‌ಆರ್‌ಟಿಸಿ ಹಾಗೂ ತಮಿಳುನಾಡು ಸಾರಿಗೆ ಬಸ್ಸುಗಳು ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಆರೋಗ್ಯ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕ, ಪ್ರಾದೇಶಿಕ ಸಾರಿಗೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಜಾತ್ರಾ ಸಮಯದಲ್ಲಿ ನಿರ್ವಹಿಸಬೇಕಿರುವ ಕಾರ್ಯಗಳ ಸಂಬಂಧ ಸಭೆಯಲ್ಲಿ ಸೂಚನೆ ನೀಡಲಾಯಿತು.
ಸಾಲೂರು ಶ್ರೀಗಳಾದ ಶಾಂತ ಮಲ್ಲಿಕಾರ್ಜುನಸ್ವಾಮೀಜಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ತಹಶೀಲ್ದಾರ್ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಬೆಯಲ್ಲಿ ಉಪಸ್ಥಿತರಿದ್ದರು.