ಮೈಸೂರು: 1 ಯುಜಿಡಿ ನೀರು ಸರಾಗವಾಗಿ ಹರಿಯದೆ ಮನೆ ಮುಂದೆ ನಾಲೆಯಂತೆ ಹರಿದು ಬರುತ್ತಿದ್ದು. ಸುತ್ತ ಮುತ್ತ ಸಾರ್ವಜನಿಕರು ನಿವಾಸಿಗಳು ಓಡಾಟಕ್ಕೆ ತೊಂದರೆಯಾಗಿದೆ.ಮೂಗು ಮುಚ್ಚಿಕೊಂಡು ಜೀವನ ಮಾಡುವಂತ ಪರಿಸ್ಥಿತಿ ಬಂದಿದೆ.ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಕ್ಕಳು ಆರೋಗ್ಯ ಹದಗೆಟ್ಟಿತಿದ್ದು ಆಸ್ಪತ್ರೆಗೆ ಮಕ್ಕಳು ದಾಖಲುಗುತಿದ್ದಾರೆ.ತಿಂಗಳಿನಿಂದ ರಸ್ತೆ ಬದಿಯ ಯುಜಿಡಿ ನೀರು ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದ್ದು.
ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ಕಸವು ಸೇರಿ ಕೊಳೆಯುತ್ತಿದ್ದು ಸುಣ್ಣದಕೇರಿ 7 ನೇ ಕ್ರಾಸ್‌ನಲ್ಲಿ ದುರ್ವಾಸನೆ ಬೀರುತ್ತಿದೆ. ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಸುತ್ತಮುತ್ತಲಿನ ಮನೆಗಳ ವಾಸ ಮಾಡದೆ ವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುವಂತಿದೆ. ಇದಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ನಗರ ಪಾಲಿಕೆ ಸದಸ್ಯರ ಬೇಜವಾಬ್ದಾರಿತನವೇ ಕಾರಣ ಎಂದು ೫೦ನೇ ವಾರ್ಡಿನ ಸುಣ್ಣದಕೇರಿ ನಿವಾಸಿಗಳು ಹಿಡಿಶಾಪ ಹಾಕುತ್ತಿದ್ದಾರೆ.