
ಚಾಮರಾಜನಗರ: ಕೊರೊನಾ ಸಂಕ? ಕಾಲವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ಮಂಡಿಸಿದ್ದು, ಯಾರಿಗೂ ಹೊರೆ ಏರದ ಬಜೆಟ್ ಇದಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ೪೮,೦೦೦ ಕೋಟಿ ರೂ. ಅನುದಾನ ಘೋ?ಣೆ ಮಾಡಲಾಗಿದೆ. ಅಲ್ಲದೇ ಈ ಸಾಲಿನಲ್ಲಿ ಸುಮಾರು ೮೦ ಲಕ್ಷ ಫಲಾನುಭವಿಗಳಿಗೆ ವಸತಿ ಒದಗಿಸಲಾಗುವುದೆಂದು ಘೋಷಿಸಲಾಗಿದೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪರಿಣಾಮಕಾರಿಯಾಗಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸಲಾಗುತ್ತದೆ. ದೇಶದಲ್ಲಿ ವಸತಿ ಸೌಲಭ್ಯದ ಉನ್ನತೀಕರಣಕ್ಕೆ ಬಜೆಟ್‌ನಲ್ಲಿ ಮಹತ್ವ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್, ರಾಜ್ಯದ ಸರ್ವರಿಗೂ ಸೂರು ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ.
ಗ್ರಾಮೀಣಾಭಿವೃದ್ಧಿ, ನದಿಗಳ ಜೋಡಣೆ, ಮನೆ ಮನೆಗೂ ಶುದ್ಧ ಕುಡಿಯುವ ನೀರು, ಪ್ರತಿ ಗ್ರಾಮಕ್ಕೂ ೫ಜಿ ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿಗೆ ೨೦ ಸಾವಿರ ಕೋಟಿ ರೂಪಾಯಿಗಳು, ವಿಶ್ವದರ್ಜೆಯ ಡಿಜಿಟಲ್ ಪಾಠಶಾಲೆ, ದೇಶದ ನೂರು ಜಿಲ್ಲೆಗಳ ನಗರಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಸಂಪರ್ಕ, ಬೆಂಗಳೂರು ಮೆಟ್ರೋ ರೈಲು ಮಾರ್ಗ ವಿಸ್ತರಣೆ, ಉತ್ಪಾದನಾ ಕ್ಷೇತ್ರಕ್ಕೆ ನೀಡಲಾಗಿರುವ ಆದ್ಯತೆ ಸೇರಿದಂತೆ ಎಲ್ಲಾ ವಲಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ದೇಶದ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ.
ಜನಪರ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.