ಮೈಸೂರು: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದ ಅವರು ಆರೋಗ್ಯವಾಗಿದ್ದಾರೆ ಎಂದು ವರುಣ ಕ್ಷೇತ್ರದ ಶಾಸಕ ಹಾಗೂ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಎಡಬಿಡದೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು ವೈದ್ಯರ ಸಲಹೆಯಂತೆ ಕೊರೊನಾ ತಪಾಸಣೆ ಮಾಡಿಸಿಕೊಂಡು ನೆಗೆಟಿವ್ ವರದಿ ಬಂದಿದ್ದು ವೈದ್ಯರ ಸಲಹೆಯಂತೆ ಸಿದ್ದರಾಮಯ್ಯನವರು ವಿಶ್ರಾಂತಿ ಪಡೆಯುತ್ತಿದ್ದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಅವರು ಚೆನ್ನಾಗಿದ್ದಾರೆ ಎಂದು ತಿಳಿಸಿದರು

ಈಗಾಗಲೇ ಸಿದ್ದರಾಮಯ್ಯನವರು ಹಾಕಿಕೊಂಡಿದ್ದ ಪ್ರವಾಸ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ವಿವರಗಳನ್ನು ತಿಳಿಸಲಾಗುವುದು ಎಂದು ತಿಳಿಸಿದರಲ್ಲದೆ, ಕ್ಷೇತ್ರದಲ್ಲಿ ನಾನು ಕೂಡ ಪ್ರವಾಸ ಕೈಗೊಳ್ಳಬೇಕಾಗಿತ್ತು ಅವರ ಆರೋಗ್ಯದ ಹಿತದೃಷ್ಟಿಯಿಂದ ನಮ್ಮ ಕಾರ್ಯಕ್ರಮಗಳನ್ನು ಸಹ ರದ್ದುಗೊಳಿಸಲಾಗಿದೆ ಎಂದು ಹೇಳಿದರು.

By admin