ಸರಗೂರು: ಅಖಿಲ ಕರ್ನಾಟಕ ಜಿ.ಪರಮೇಶ್ವರ ಯುವ ಸೈನ್ಯ, ಜಿಲ್ಲಾ ಯೂತ್ ಕಾಂಗ್ರೆಸ್‍ನಿಂದ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಜಿಲ್ಲಾ ಯೂತ್ ಕಾಂಗ್ರೆಸ್‍ನ ಅಧ್ಯಕ್ಷ ಹಿನಕಲ್ ಮಂಜು ನೇತೃತ್ವದಲ್ಲಿ ಯೂತ್ ಕಾಂಗ್ರೆಸ್‍ನ ಐಕಾನ್ ಮಹಮ್ಮದ್ ನಳಪಾಡ್ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಯುವಕರೊಂದಿಗೆ ಕಾಂಗ್ರೆಸ್ ಪಕ್ಷ ಕನಾಸಂಘಟನೆ, ಪಕ್ಷದ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸಲಾಯಿತು. ಇಲ್ಲದೆ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಕ್ರಮವಹಿಸಬೇಕು. ರಾಹುಲ್ ಗಾಂಧಿ ಅವರ ಬಲಪಡಿಸಲು ಮತ್ತಷ್ಟು ಯುವಕರನ್ನು ಪಕ್ಷದ ಕಡೆ ಸೆಳೆಯುವ ಕುರಿತು ಚರ್ಚಿಸಲಾಯಿತು.
ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಜಿಲ್ಲಾ ಯೂತ್ ಕಾಂಗ್ರೆಸ್‍ನ ಅಧ್ಯಕ್ಷ ಹಿನಕಲ್ ಮಂಜು ಮಾತನಾಡಿ, ಗ್ರಾಮೀಣ, ನಗರ ಪ್ರದೇಶಗಳಲ್ಲಿ ಯುವಕರನ್ನು ಹೆಚ್ಚು ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವ ಮೂಲಕ ಪಕ್ಷದ ಸಂಘಟನೆ ತೊಡಗಲು ಕ್ರಮವಹಿಸಬೇಕು ಎಂದು ಹೇಳಿದರು. ಅಖಿಲ ಕರ್ನಾಟಕ ಜಿ.ಪರಮೇಶ್ವರ ಯುವ ಸೈನ್ಯದ ಜಿಲ್ಲಾಧ್ಯಕ್ಷ ಗಟ್ಟವಾಡಿ ಮಂಜು ಮಾತನಾಡಿದರು. ಸೈನ್ಯದ ಎಚ್.ಡಿ.ಕೋಟೆ, ಸರಗೂರು ತಾಲೂಕಿನ ಅಧ್ಯಕ್ಷ ಮಂಜು ಮಾಗುಡಿಲು, ಹಿನಕಲ್ ಮಂಜು, ಮುಳ್ಳೂರು ಮಹೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

By admin